ನಕ್ಸಲ್ ಗುಂಪುಗಳಿಂದ ಬೆದರಿಕೆ: ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಹೇಮಚಂದ್ ಮಾಂಝಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಾಂಪ್ರದಾಯಿಕ ವೈದ್ಯ ವೃತ್ತಿಗಾರರಾದ ಹೇಮಚಂದ್ ಮಾಂಝಿ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

ನಕ್ಸಲ್ (Naxals) ಗುಂಪುಗಳಿಂದ ಹೆಚ್ಚುತ್ತಿರುವ ಬೆದರಿಕೆಗಳಿಂದ ಮನನೊಂದು ಮಾಂಝಿ ಈ ತೀರ್ಮಾನ ಮಾಡಿದ್ದಾರೆ. ಇದು ಅವರ ಸುರಕ್ಷತೆಯ ಬಗ್ಗೆ ಭಯಪಡುವಂತೆ ಮಾಡಿದೆ.

ಮಾಂಝಿ ಅವರು ಸಾಂಪ್ರದಾಯಿಕ ಔಷಧಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು. ಅವರ ಕೆಲಸವು ಸ್ಥಳೀಯ ಚಿಕಿತ್ಸಾ ಪದ್ಧತಿಗಳನ್ನು ಸಂರಕ್ಷಿಸುವಲ್ಲಿ ಮತ್ತು ದೂರದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಈ ಸಂಬಂಧ ಪ್ರತಿಕ್ರಿಯಿಸಿದ ಡಾ. ಮಾಂಝಿ, ಮತ್ತೊಮ್ಮೆ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದರು. ಕಬ್ಬಿಣದ ಅದಿರು ಗಣಿಯೊಂದಿಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಈಗಾಗಲೇ ಗ್ರಾಮಸ್ಥರಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು. ಇದೇ ವೇಳೆ ಕುಟುಂಬದವರೊಂದಿಗೆ ಚರ್ಚಿಸಿದ ನಂತರ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲು ಮತ್ತು ಸಾಂಪ್ರದಾಯಿಕ ವೈದ್ಯ ಪದ್ಧತಿಯನ್ನು ನಿಲ್ಲಿಸಲು ನಿರ್ಧರಿಸಿರುವುದಾಗಿ ಅವರು ತಿಳಿಸಿದರು.

ನಾನು ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುತ್ತೇನೆ. ಯಾಕೆಂದರೆ ಮಾವೋವಾದಿಗಳು ನನಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಹೇಗೆ ಸಿಕ್ಕಿತು ಎಂದು ಹೇಳುತ್ತಾರೆ. ನಾನು 20 ವರ್ಷ ವಯಸ್ಸಿನವನಾಗಿದ್ದಾಗಿನಿಂದ ನಾನು ಜನರ ಸೇವೆಗಾಗಿ ಪ್ರಶಸ್ತಿಯನ್ನು ಪಡೆದಿದ್ದೇನೆ. ಆದರೆ ನಾನು ಪ್ರಶಸ್ತಿಗೆ ಬೇಡಿಕೆ ಇಟ್ಟಿಲ್ಲ ಎಂದರು.

ಮೇ 26 ರಂದು ರಾತ್ರಿ ನಕ್ಸಲರು ಜಿಲ್ಲೆಯ ಛೋಟೆಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯ ಚಮೇಲಿ ಮತ್ತು ಗೌರ್ದಂಡ್ ಗ್ರಾಮಗಳಲ್ಲಿ ನಿರ್ಮಾಣ ಹಂತದಲ್ಲಿರುವ 2 ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದರು. ಅಲ್ಲದೇ ಡಾ. ಮಾಂಝಿ ಅವರಿಗೆ ಬೆದರಿಕೆ ಹಾಕಿ ಬ್ಯಾನರ್‌ಗಳನ್ನು ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!