ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ ನಟ ಸುದೀಪ್ ಅವರಿಗೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಸಿಸಿಬಿ ಪೊಲೀಸರಿಂದ ಡೈರೆಕ್ಟರ್ ರಮೇಶ್ ಕಿಟ್ಟಿ ಎಂಬಾತನ ಬಂಧನವಾಗಿದ್ದು, ಈತ ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ಎಂದು ತಿಳಿದುಬಂದಿದೆ.
ರಮೇಶ್ ಈ ಹಿಂದೆ ಹಲವು ಸಿನಿಮಾಗಳನ್ನ ಡೈರೆಕ್ಟ್ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು. ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿದ್ದೆ ಎಂದು ಸಿಸಿಬಿ ವಿಚಾರಣೆಯಲ್ಲಿ ರಮೇಶ್ ಬಾಯ್ಬಿಟ್ಟಿದ್ದಾನಂತೆ. ಈ ಪ್ರಕರಣ ಹಿಂದೆ ಇನ್ನೂ ಕೆಲ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಜೆ.ಪಿ.ನಗರದಲ್ಲಿ ಸುದೀಪ್ ಅವರ ಮನೆಗೆ ಕಳೆದ ಮಾ.29 ರಂದು ಅನಾಮಧೇಯ ವ್ಯಕ್ತಿಯಿಂದ ಅಂಚೆ ಮೂಲಕ ಈ ಬೆದರಿಕೆ ಪತ್ರಗಳು ಬಂದಿದ್ದು, ಸುದೀಪ್ ಅವರ ಮ್ಯಾನೇಜರ್ ಹಾಗೂ ನಿರ್ಮಾಪಕ ಮಂಜುನಾಥ್ ಅಲಿಯಾಸ್ ಜಾಕ್ ಮಂಜು ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು.