ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ ಎನ್ನುವ ಸುದ್ದಿ ಹಬ್ಬಿದ ಬೆನ್ನಲ್ಲೇ ನಟನಿಗೆ ಬೆದರಿಕೆ ಪತ್ರಗಳು ಬಂದಿವೆ.
ನಿಮ್ಮ ಖಾಸಗಿ ವಿಡಿಯೋ ಲೀಕ್ ಮಾಡ್ತೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕೇಸ್ ಇದೀಗ ಸಿಸಿಬಿಗೆ ವರ್ಗಾವಣೆಯಾಗಿದ್ದು, ಪತ್ರಬರೆದ ಕಿಡಿಗೇಡಿಗಳನ್ನು ಹುಡುಕಲಾಗುತ್ತಿದೆ.
ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿಯಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬೆದರಿಕೆ ಪತ್ರ ಬಂದಿದ್ದು, ಸಿಸಿಬಿ ತನಿಖೆ ನಡೆಸುತ್ತಿದೆ.