ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ: ನಕಲಿ ನಂಬರ್​ ಪ್ಲೇಟ್​ ನ ಕಾರು ಬಳಸಿದ ಕಿಡಿಗೇಡಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್​ (Kichcha Sudeep) ಅವರು ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸುವುದಾಗಿ ಸುದ್ದಿಯಾದ ಬೆನ್ನಲ್ಲೇ ಬೆದರಿಕೆ ಪತ್ರ ಬಂದಿದ್ದು, ಅವರ ಖಾಸಗಿ ವಿಡಿಯೋಗಳನ್ನು ವೈರಲ್​ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.

ಇದೀಗ ಈ ಪತ್ರಗಳ ಹಿಂದಿನ ಕಿಡಿಗೇಡಿಗಳು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ತನಿಖೆ ಚುರುಕುಗೊಂಡಿದೆ.

ಬೆದರಿಕೆ ಪತ್ರ ರವಾನೆ ಆಗಿರುವುದು ದೊಮ್ಮಲೂರು ಅಂಚೆ ಕಚೇರಿಯಿಂದ ಎಂಬುದು ಗೊತ್ತಾಗಿದೆ. ಅದರ ಜಾಲ ಹುಡುಕಿ ಹೊರಟ ಪೊಲೀಸರಿಗೆ ಮತ್ತಷ್ಟು ಮಾಹಿತಿ ಸಿಕ್ಕಿದೆ.

ದುಷ್ಕರ್ಮಿಗಳು ಸ್ವಿಫ್ಟ್ ಕಾರಿನಲ್ಲಿ ಬಂದು ಪೋಸ್ಟ್ ಬಾಕ್ಸ್​ಗೆ ಬೆದರಿಕೆ ಪತ್ರ (Threat Letter) ಹಾಕಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಈ ಕಾರಿನ ನಂಬರ್​ ಪ್ಲೇಟ್​ ನಕಲಿ ಎಂಬುದು ಕೂಡ ತಿಳಿದುಬಂದಿದೆ.

ಕೆಂಗೇರಿ ಬಳಿಯ ವ್ಯಕ್ತಿಯೊಬ್ಬರಿಗೆ ಸೇರಿರುವ ಸ್ವಿಫ್ಟ್ ಕಾರನ್ನು ಕಿಡಿಗೇಡಿಗಳು ಬಳಸಿರುವುದು ಗೊತ್ತಾಗಿದೆ. ಆದರೆ ಬೆದರಿಕೆ ಪತ್ರಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಆ ವ್ಯಕ್ತಿ ಹೇಳಿದ್ದಾರೆ. ನಂಬರ್ ಪ್ಲೇಟ್​ ಬದಲಿಸಿ ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ. ಬೆದರಿಕೆ ಪತ್ರ ಬರೆದ ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!