ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಸೇರೋದು ಬಹುತೇಕ ಖಚಿತವಾಗುತ್ತಿದ್ದಂತೆಯೇ ಸುದೀಪ್‌ಗೆ ಎರಡು ಬೆದರಿಕೆ ಪತ್ರ ಬಂದಿದೆ.
ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಸುದೀಪ್ ಮ್ಯಾಜೇಜರ್ ಕೈಗೆ ಎರಡು ಬೆದರಿಕೆ ಪತ್ರ ಬಂದು ಸೇರಿದೆ.
ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎಂದು ಬರೆದಿದ್ದು, ನಟನ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಪತ್ರ ಕಳಿಸಿದ್ದು ಯಾರು ಎನ್ನುವ ಹುಡುಕಾಟ ನಡೆಯುತ್ತಿದೆ.
ಸುದೀಪ್ ಅವರ ಘನತೆಗೆ ಧಕ್ಕೆ ತರಲು ಯಾರೋ ಕಿಡಿಗೇಡಿಗಳು ಸಂಚು ನಡೆಸಿದ್ದಾರೆ. ಸುದೀಪ್ ಮಾನಸಿಕ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.