ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಹಾಗೂ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಂಜೆಯೊಳಗೆ ಸ್ಫೋಟವಾಗಲಿದೆ ಎಂದು ಅಪರಿಚಿತನಿಂದ ಬಂದ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇ-ಮೇಲ್ ಸಂದೇಶ ಬಂದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, ಚಾಮರಾಜನಗರ ಎಸ್ಪಿ ಕವಿತಾಗೆ ಮಾಹಿತಿ ನೀಡಿದೆ. ಸದ್ಯ ಇ-ಮೇಲ್ ಖಾತೆ ಬಗ್ಗೆ ಮಾಹಿತಿ ಪೊಲೀಸರು ಪಡೆಯುತ್ತಿದ್ದಾರೆ. ಚಾಮರಾಜನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚಾಮರಾಜನಗರ ಡಿಸಿ ಕಚೇರಿಗೆ ಬೆದರಿಕೆ ಇ-ಮೇಲ್ ಬಂದಿದೆ. ಮಧ್ಯಾಹ್ನ 3 ಗಂಟೆಯೊಳಗೆ ಡಿಸಿ ಕಚೇರಿ ಖಾಲಿ ಮಾಡಬೇಕು, ಅಷ್ಟರೊಳಗೆ ಸ್ಫೋಟ ಮಾಡುತ್ತೇವೆ ಎಂದು ಸಂದೇಶದಲ್ಲಿದೆ. ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ನೌಕರರನ್ನು ಡಿಸಿ ಕಚೇರಿಯಿಂದ ಹೊರಗೆ ಕಳುಹಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ಮಾಡಲಾಗಿದೆ.