ಹೊಸದಿಗಂತ ಡಿಜಿಟಲ್ ಡೆಸ್ಕ್:
100ಕ್ಕೂ ಹೆಚ್ಚು ವಿಮಾನಗಳಿಗೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸ್ಫೋಟಿಸುವ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಬುಧವಾರ(ಅ.23) ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದಿನ ಟ್ವಿಟರ್) ಗೆ ಛೀಮಾರಿ ಹಾಕಿದೆ.
ಎಲ್ಲಾ ಬೆದರಿಕೆಗಳನ್ನು ಎಕ್ಸ್ ಮೂಲಕ ಮಾತ್ರ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಜಂಟಿ ಕಾರ್ಯದರ್ಶಿ ಸಂಕೇತ್ ಎಸ್. ಭೋಂಡ್ವೆ ಏರ್ಲೈನ್ಸ್ ಮತ್ತು ಎಕ್ಸ್ ಮತ್ತು ಮೆಟಾದಂತಹ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ಪ್ರತಿನಿಧಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು.
ಈ ವೇಳೆ ಈ ಅಪರಾಧಗಳನ್ನು ಎಕ್ಸ್ ಪ್ರಮೋಟ್ ಮಾಡುತ್ತಿದೆಯೇನೋ ಎಂಬಂತೆ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ಹೇಳಿದರು. ಇಂತಹ ಅಪಾಯಕಾರಿ ವದಂತಿಗಳನ್ನು ಹರಡುವುದನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಶ್ನಿಸಿದರು.
ಕಳೆದ ಕೆಲವು ದಿನಗಳಲ್ಲಿ, ಭಾರತೀಯ ವಿಮಾನಯಾನ ಸಂಸ್ಥೆಗಳ 120 ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ ಹೀಗಾಗಿ ನಿಮ್ಮ ಕ್ರಮ ಏನು? . ಮಂಗಳವಾರ ಕೂಡ ಇಂಡಿಗೋ, ವಿಸ್ತಾರಾ ಮತ್ತು ಏರ್ ಇಂಡಿಯಾದ 30 ವಿಮಾನಗಳಿಗೆ ಇಂತಹ ಬೆದರಿಕೆಗಳು ಬಂದಿವೆ ಎಂದು ಪ್ರಶ್ನಿಸಿದರು.
ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಾಗದಂತೆ ಸಮಸ್ಯೆಯನ್ನು ನಿಭಾಯಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಹೇಳಿದ್ದಾರೆ. ಇಂತಹ ಸುಳ್ಳು ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು.
ಬಳಿಕ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ಪ್ರತಿನಿಧಿಗಳ ಅಸಮರ್ಪಕ ಉತ್ತರಕ್ಕೆ ಛೀಮಾರಿ ಹಾಕಿತು.