October 18, 2026
Sunday, October 18, 2026
spot_img

ಪ್ರಧಾನಿ ಮೋದಿಗೆ ಬೆದರಿಕೆ! ಮೆಲ್ಬೋರ್ನ್ ಕಾರ್ಯಕ್ರಮಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಸಂದೇಶ ಹರಿದಾಡಿದ್ದು, ಈ ಪ್ರಕರಣದ ತನಿಖೆಯನ್ನು ಆಸ್ಟ್ರೇಲಿಯಾ ಫೆಡರಲ್ ಪೊಲೀಸರು (AFP) ಆರಂಭಿಸಿದ್ದಾರೆ.

ಜುಲೈ 9ರಂದು ಮೆಲ್ಬೋರ್ನ್‌ನ ಮಾರ್ವೆಲ್ ಸ್ಟೇಡಿಯಂನಲ್ಲಿ ನಡೆಯಲಿರುವ ‘Melbourne Meets Modi’ ಕಾರ್ಯಕ್ರಮದ ಫೇಸ್‌ಬುಕ್ ಪೋಸ್ಟ್‌ಗೆ ಈ ಬೆದರಿಕೆ ಕಾಮೆಂಟ್ ಮಾಡಲಾಗಿದೆ.

ಐಪಿ ವಿಳಾಸ ಪತ್ತೆ

ಬೆದರಿಕೆ ಸಂದೇಶ ಹಾಕಿದ ಖಾತೆಗೆ ಸಂಬಂಧಿಸಿದ ಐಪಿ ವಿಳಾಸವನ್ನು ತನಿಖಾಧಿಕಾರಿಗಳು ಗುರುತಿಸಿದ್ದು, ಅದರ ಮೂಲ ಹಾಗೂ ಉದ್ದೇಶದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಕಾನೂನು ಉಲ್ಲಂಘನೆಯಾಗಿದೆಯೇ ಎಂಬುದನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ:

ಭದ್ರತೆ ಮತ್ತಷ್ಟು ಬಿಗಿ

ಮೋದಿ ಅವರ ಆಸ್ಟ್ರೇಲಿಯಾ ಭೇಟಿಗೆ ಈಗಾಗಲೇ ವ್ಯಾಪಕ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಫೆಡರಲ್ ಪೊಲೀಸರು, ಸ್ಥಳೀಯ ಪೊಲೀಸ್ ಇಲಾಖೆ ಹಾಗೂ ವಿಶೇಷ ಭದ್ರತಾ ಘಟಕಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ.

ಜುಲೈ 9ರಂದು ಕಾರ್ಯಕ್ರಮ

ಪ್ರಧಾನಿ ಮೋದಿ ಅವರು ದ್ವಿಪಕ್ಷೀಯ ಸಭೆಗಳ ಜೊತೆಗೆ ಮೆಲ್ಬೋರ್ನ್‌ನ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದು, ಬೆದರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗಿದೆ.

Must Read