ಅಂಬೇಡ್ಕರ್ ವಿಚಾರಧಾರೆಗಳ ಬಗ್ಗೆ ಮಾತನಾಡದಂತೆ ಬೆದರಿಕೆಯೊಡ್ಡಿದ ಆರೋಪ : ಸಹ ಶಿಕ್ಷಕ ಅಮಾನತು

ಹೊಸದಿಗಂತ ವರದಿ, ಮಡಿಕೇರಿ :

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಮಾತನಾಡದಂತೆ ಬೆದರಿಕೆಯೊಡ್ಡಿದ ಆರೋಪದಡಿಯಲ್ಲಿ ಸೋಮವಾರಪೇಟೆ ತಾಲೂಕಿನ ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕನೊಬ್ಬನನ್ನು ಅಮಾನತುಗೊಳಿಸಲಾಗಿದೆ.

ಕುಶಾಲನಗರದ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿದ್ದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ಅಭಿಲಾಷ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು 26 ನಿಮಿಷಗಳ ಭಾಷಣ ಮಾಡಿದ್ದರು. ಇದನ್ನು ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ, ಅಂಬೇಡ್ಕರ್ ಅವರ ವಿಚಾರಧಾರೆ ಬಗ್ಗೆ ಮಾತನಾಡದಂತೆ ಸಹ ಶಿಕ್ಷಕ ಧರ್ಮರಾಜ್ ಅಭಿಲಾಷ್ ಗೆ ಮೊಬೈಲ್ ಕರೆ ಮಾಡಿ ಬೆದರಿಕೆ ಹಾಕಿರುವ ಆಡಿಯೋ ಸಂದೇಶ ವಾಟ್ಸ್ ಆಪ್ ಗ್ರೂಪ್‍ಗಳಲ್ಲಿ ಹರಿದಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು, ಸಹ ಶಿಕ್ಷಕ ಧರ್ಮರಾಜ್ ಅವರನ್ನು ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತಿನಲ್ಲಿಡಲು ಸೂಚಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!