ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಜನ್ಮಭೂಮಿ ಕಾಂಪ್ಲೆಕ್ಸ್ ಸ್ಪೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ. ಅನಾಮಿಕ ವ್ಯಕ್ತಿಯೋರ್ವ ಕಾಂಪ್ಲೆಕ್ಸ್ನ್ನು ಸ್ಫೋಟಿಸುತ್ತೇನೆ ಎಂದು ಕರೆ ಮಾಡಿದ್ದಾನೆ. ಅಯೋಧ್ಯೆಯ ರಾಮ್ ಕೋಟ್ ನಿವಾಸಿ ಮನೋಜ್ಗೆ ಕರೆ ಬಂದಿದ್ದು, ಮನೋಜ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ವಿವಿಧ ಪ್ರದೇಶಗಳಲ್ಲಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳಿಗೆ ಅಲರ್ಟ್ ನೀಡಿದ್ದು, ಕರೆ ಮಾಡಿದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ