ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ ಎಸ್ ಎಸ್ ನಿಷೇಧದ ಕುರಿತಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಬೆದರಿಕೆ ಕರೆ ಬರುತ್ತಿವೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹೌದ ನನಗೆ ಗೊತ್ತಿಲ್ಲ ಈ ಕುರಿತು ಪ್ರಿಯಾಂಕ ಖರ್ಗೆ ಕರೆದು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ನನಗೆ ಅನೇಕ ಬೆದರಿಕೆ ಕರೆಗಳು ಬರುತ್ತಿವೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿದ್ದು, ಇದಕ್ಕೆ ನಾನು ಯಾವುದಕ್ಕೂ ವಿಚಲಿತಲಾಗಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ.

