ಕಾರಿನಲ್ಲಿ ಅಕ್ರಮ ಗಾಂಜಾ ಸಾಗಾಟ: ಮೂವರು ಆರೋಪಿಗಳು ಪೊಲೀಸ್ ವಶ

ಹೊಸದಿಗಂತ ಮಡಿಕೇರಿ:

ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿಕೊಂಡ ಪರಿಣಾಮ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬಯಲಾಗಿದೆ.

ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗ ಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್’ಗಳು ಪತ್ತೆಯಾಗಿದ್ದು, ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜಲುದ್ದೀನ್, ಮುಷ್ತಾಕ್, ಜಾಬಿರ್ ಎಂಬವರನ್ನು ಮತ್ತು ಗಾಂಜಾ ಪ್ಯಾಕೇಟ್’ಗಳನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪಿರಿಯಾಪಟ್ಟಣ ಭಾಗದಲ್ಲಿ ಯಥೇಚ್ಛವಾಗಿ ಗಾಂಜಾ ಮಾರಾಟ ದಂಧೆ ನಡೆಯುತ್ತಿದೆ ಎಂಬ ಸುದ್ದಿಗೆ ಈ ಪ್ರಕರಣ ಪುಷ್ಟಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!