ಹೊಸದಿಗಂತ ವರದಿ,ವಿಜಯನಗರ:
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡಿನ ಪ್ರತಿಷ್ಠಿತ `ನಾಡೋಜ’ ಪದವಿಯನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಾ.ಶಿವರಾಜ ವಿ. ಪಾಟೀಲ್, ಕೊಟ್ಟೂರಿನ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹಾಗೂ ಪದ್ಮಶ್ರೀ ಪುರಸ್ಕೃತ ಧಾರವಾಡದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕ ಎಂ.ವೆoಕಟೇಶ್‌ಕುಮಾರ್ ಅವರಿಗೆ ಪ್ರತಿಷ್ಠಿತ `ನಾಡೋಜ’ ಗೌರವ ಪದವಿಯನ್ನು ಪ್ರದಾನ ಮಾಡಲಾಯಿತು.
ಹೊಸಪೇಟೆ ಸಮೀಪದ ಕನ್ನಡ ವಿಶ್ವವಿದ್ಯಾಲಯ ಆವರಣದಲ್ಲಿರುವ ನವರಂಗ ಬಯಲು ರಂಗ ಮಂದಿರದಲ್ಲಿ ಶುಕ್ರವಾರ ಸಂಜೆ ನಡೆದ ಹಂಪಿ ಕನ್ನಡ ವಿಶ್ವವಿದ್ಯಾಲಯದ ೩೩ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೂವರು ಗಣ್ಯರಿಗೆ `ನಾಡೋಜ’ ಗೌರವ ಪದವಿ ಪ್ರದಾನ ಮಾಡಿ, ಸನ್ಮಾನಿಸಿ ಶುಭ ಕೋರಿದರು.
ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಏಳು ಜನರಿಗೆ ಡಿ.ಲಿಟ್ ಹಾಗೂ ೧೯೮ ವಿದ್ಯಾರ್ಥಿಗಳು ಪಿಎಚ್‌ಡಿ ಪದವಿ ಪ್ರದಾನ ಮಾಡಿದರು.
ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ರಾಜಾಸಾಬ್ ಎ.ಎಚ್, ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ, ಕುಲಸಚಿವ ಡಾ.ವಿಜಯ ಪೂಣಚ್ವ ತಂಬoಡ ಉಪಸ್ಥಿತರಿದ್ದರು.