ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಸಂಗ್ರಹಕಾರ ಹುದ್ದೆ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಂಕ್ಷಿಗಳಿಂದ ಲಕ್ಷಾಂತರ ರುಪಾಯಿ ವಂಚಿಸಿದ ಆರೋಪದ ಮೇಲೆ ಮೂವರನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು ಕಲಬುರಗಿ ವಿದ್ಯಾನಗರದ ಲಕ್ಷ್ಮಿಕಾಂತ ಹೊಸಮನಿ (41), ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಕುಲಪ್ಪಸಿಂಗೆ, ಉತ್ತರಹಳ್ಳಿಯ ಮುರಳಿ ಎಂದು ಗುರ್ತಿಸಲಾಗಿದೆ.
ವಂಚನೆಗೊಳಗಾದ ಆಲಮೇಲದ ಹುಸೇನಪ್ಪ ಮಾಡ್ಯಾಳ ಸಿಸಿಬಿ ಠಾಣೆಗೆ ದೂರು ನೀಡಿದ್ದು, ಸಿಸಿಬಿ ಇನ್ಸ್ಪೆಕ್ಟರ್ ದೇವೇಂದ್ರಪ್ಪ ನೇತೃತ್ವದ ತಂಡ ತನಿಖೆ ನಡೆಸಿ ತಾಂತ್ರಿಕ ಮಾಹಿತಿ ಆಧರಿಸಿ ಮೌರ್ಯ ಹೋಟೆಲ್ ಜಂಕ್ಷನ್ ಮತ್ತು ಹೊಸಕೆರೆಹಳ್ಳಿ ಬಸ್ ನಿಲ್ದಾಣದ ಸಮೀಪ ಆರೋಪಿಗಳನ್ನು ಬಂಧಿಸಿದೆ.