ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ದಲಿತ ಬಾಲಕನಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಮೂವರು ಯುವಕರನ್ನು ಗುರುವಾರ ಬಂಧಿಸಲಾಗಿದೆ.
15 ವರ್ಷ ವಯಸ್ಸಿನ ಸಂತ್ರಸ್ತ ತಂತ್ರಜ್ಞರಾಗಿ ಕೆಲಸ ಮಾಡುತ್ತಾರೆ. ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಮೂವರು ಯುವಕರು ಆತನನ್ನು ಅಡ್ಡಗಟ್ಟಿದ್ದು, ಮದ್ಯದ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿ, ಅದನ್ನು ಸಂತ್ರಸ್ತನ ಬಾಯಿಗೆ ಇಟ್ಟು ಕುಡಿಯಲು ಒತ್ತಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.