ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಅಧಿಕಾರಿಗಳು ಬೆಂಗಳೂರಿನಲ್ಲಿ ಇಂದು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾ ವಲಸಿಗರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತರನ್ನು ಖಲೀಲ್, ಅಬ್ದುಲ್ ಮತ್ತು ಮೊಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣವೊಂದರ ತನಿಖೆಯ ಭಾಗವಾಗಿ ಎನ್‌ಐಎ ತನಿಖಾಧಿಕಾರಿಗಳ ತಂಡ ಇಂದು ಬೆಂಗಳೂರಿಗೆ ಭೇಟಿ ನೀಡಿತ್ತು. ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವಾಗ ಮೂವರು ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ತಿಳಿದುಬಂದಿದೆ. ಅಕ್ರಮ ವಲಸಿಗರನ್ನು ವಶಕ್ಕೆ ಪಡೆದ ಅಧಿಕಾರಿಗಳು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೂಡಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.