ಹೊಸದಿಗಂತ ವರದಿ,ಕೂಡ್ಲಿಗಿ(ವಿಜಯನಗರ):
ಈಜಲು ಹೋದ ಮೂವರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮತಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದ ಚಿನ್ನಹಗರಿಹಳ್ಳದಲ್ಲಿ ಈಜಾಡಲು ತೆರಳಿದ ಗ್ರಾಮದ ಗುರು(೧೪), ವಿನಯ್ ಕುಮಾರ್(೧೧) ಹಾಗೂ ಸಾಗರ (೧೪) ಮೃತ ಪಟ್ಟಿದ್ದಾರೆ.
ಮಂಗಳವಾರ ಬೆಳಿಗ್ಗೆ ೧೧.೩೦ರ ಸುಮಾರಿಗೆ ಚಿನ್ನಹಗರಿ ಹಳ್ಳದಲ್ಲಿ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಕುರಿತು ಮಾಹಿತಿ ಸುದ್ದಿ ತಿಳಿಯುತ್ತಿದ್ದಂತೆ ಕಾನಹೊಸಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.