ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯು ಭೀಕರ ಪ್ರವಾಹಕ್ಕೆ ಸಿಲುಕಿದ್ದು, ರಾಜ್ಘಾಟ್, ಕೆಂಪುಕೋಟೆ, ಸುಪ್ರೀಂ ಕೋರ್ಟ್ನಂತರ ಪ್ರಮುಖ ಸ್ಥಳಗಳು ಜಲಾವೃತವಾಗಿವೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ಯಮುನಾ ನದಿಯ ಆರ್ಭಟ ಮತ್ತಷ್ಟು ಹೆಚ್ಚಾಗುತ್ತಿದ್ದು, ಜನರ ಜೀವನ ಸಂಪುರ್ಣ ಅಸ್ತವ್ಯಸ್ತಗೊಂಡಿದೆ. ಈಶಾನ್ಯ ದೆಹಲಿಯ ಪ್ರವಾಹದ ನೀರಿನಲ್ಲಿ ಈಜಲು ಪ್ರಯತ್ನಿಸುತ್ತಿದ್ದ ಮೂವರು ಬಾಲಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
10 ವರ್ಷದ ಬಾಲಕ ಮತ್ತು 13 ವರ್ಷದ ಇಬ್ಬರು ಬಾಲಕರು ಪ್ರವಾಹದಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇಂದು ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಈಶಾನ್ಯ ದೆಹಲಿಯ ಮುಕುಂದಪುರ ಪ್ರದೇಶದಲ್ಲಿನ ಮೆಟ್ರೋ ನಿಲ್ದಾಣದ ಬಳಿ ಈ ಬಾಲಕರು ಶವವಾಗಿ ಪತ್ತೆಯಾಗಿದ್ದಾರೆ.
ಪ್ರವಾಹದಲ್ಲಿ ಸಾವನ್ನಪ್ಪಿದ ಬಾಲಕರನ್ನು ಪಿಯೂಷ್ (13), ನಿಖಿಲ್ (10) ಮತ್ತು ಆಶಿಶ್ (13) ಎಂದು ಗುರುತಿಸಲಾಗಿದೆ. ಅವರೆಲ್ಲರೂ ಜಹಾಂಗೀರ್ಪುರಿ ಎಚ್-ಬ್ಲಾಕ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.