Sunday, December 3, 2023

Latest Posts

ಒಂದೇ ದಿನ ಮೂರು ಸ್ಪರ್ಧಾತ್ಮಕ ಪರೀಕ್ಷೆ: ದಿನಾಂಕ ಬದಲಾಯಿಸಲು ಸಿಎಂ ಗೆ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಒಂದೇ ದಿನ ಮೂರು ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಹಿನ್ನೆಲೆ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕದಲ್ಲಿ ನಡೆಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ಬರೆದು ಮನವಿ ಮಾಡಿದ್ದಾರೆ.

ನವೆಂಬರ್​ 5ರ ಭಾನುವಾರದಂದು 3 ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಮಾಡಲಾಗಿದೆ. KPSC ಲೆಕ್ಕ ಪರಿಶೋಧನಾ ಇಲಾಖೆಯ ಲೆಕ್ಕ ಸಹಾಯಕರ 242, ಸಹಕಾರ ಸಂಘಗಳ ನಿರೀಕ್ಷಕರ 47, ಖಾಲಿ ಇರುವ 454 ಸಿವಿಲ್ ಕಾನ್ಸ್​​ಟೇಬಲ್​ ಹುದ್ದೆಗೆ ಪರೀಕ್ಷೆ ನಿಗದಿ ಆಗಿದೆ.

ಒಂದೇ ದಿನ 3 ಹುದ್ದೆಗಳಿಗೆ ಪರೀಕ್ಷೆ ನಿಗದಿಗೊಳಿಸಿರುವುದರಿಂದ ಗೊಂದಲ ಉಂಟಾಗಿದ್ದು, ಬೇರೆ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!