ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳು ಹೆಚ್ಚು ಮಳೆಯಾಗಲಿದೆ.
ಅ.25 ಅಥವಾ 26ಕ್ಕೆ ಹಿಂಗಾರು ಪ್ರವೇಶ ಹಿನ್ನೆಲೆ ಇಂದಿನಿಂದ ಮಳೆಯ ಆರ್ಭಟ ಹೆಚ್ಚಾಗಲಿದೆ.
ಕರ್ನಾಟಕದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ತುಮಕೂರು ಭಾಗದಲ್ಲಿ ಇಂದು ಹೆಚ್ಚು ಮಳೆಯಾಗುವ ಸಂಭವವಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ,ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗಲಿದೆ.