WEATHER | ರಾಜ್ಯದಲ್ಲಿ ಮೂರು ದಿನ ಒಣಹವೆ, ನಂತರ ಜೋರು ಮಳೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದೆ. ಆದರೆ ಇನ್ನು ಹಲವು ಭಾಗಗಳಲ್ಲಿ ಮಳೆಯಾಗಿಲ್ಲ. ಒಟ್ಟಾರೆ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಒಣಹವೆ ಮುಂದುವರೆಯಲಿದೆ.

ಏಪ್ರಿಲ್​ 18ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಏಪ್ರಿಲ್‌ 18ರ ನಂತರ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯಪುರದಲ್ಲಿ ಏಪ್ರಿಲ್‌ 18ರ ನಂತರ ಮಳೆಯಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!