ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಅ.15ರಿಂದ 17ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ. ಮಲೆನಾಡು ಭಾಗದಲ್ಲಿ ಭರ್ಜರಿ ಮಳೆ (Rain News) ಸೂಚನೆ ಇದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.
ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯೆತೆಯೂ ಇದೆ.ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ ಎಂದು ತಿಳಿಸಿದೆ.