ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಶಾಸಕರಿಗೆ ಅಗತ್ಯ ತರಬೇತಿಯನ್ನು ಹಿಂದಿನಿಂದಲೂ ನೀಡಿದ್ದು, ಬೆಂಗಳೂರಿನ ನೆಲಮಂಗಲ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ. 28ರವರೆಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಮಧ್ಯಾಹ್ನ 12 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

70 ಶಾಸಕರಿಗೂ ತರಬೇತಿ ನಡೆಯಲಿದ್ದು, ನಿನ್ನೆ ಸಂಜೆಯೇ ಶಾಸಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ರವರೆಗೂ ಕಾರ್ಯಕ್ರಮಗಳು ನಡೆಯಲಿವೆ.

ಪ್ರತಿದಿನ ಸಂಜೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ನೂತನ ಶಾಸಕರ ಜೊತೆ ಸಂವಾದ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!