September 26, 2026
Saturday, September 26, 2026
spot_img

ಅತಿ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯ ಹೊರವಲಯದ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಗರ ಕ್ರಾಸ್ ಬಳಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಲಾರಿಯು ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಬಲವಾಗಿ ಗುದ್ದಿದೆ.

ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹಗಳನ್ನು ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಕಗ್ಗಲಿಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read