Sunday, October 1, 2023

Latest Posts

ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು: ತನಿಖೆಗೆ ಸಿಎಂ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈಗಾಗಲೇ 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಸೇರಿದ್ದು, ಈ ಬಗ್ಗೆ ವರದಿ ಪಡೆಯಲು ನಾಲ್ವರು ಅಧಿಕಾರಿಗಳ ಸಮಿತಿ ನಿಯೋಜನೆ ಮಾಡಲಾಗಿದೆ.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ನಗರಸಭೆ ಪೌರಾಯುಕ್ತರು, ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಈ ಸಮಿತಿಯಲ್ಲಿ ಇರಲಿದ್ದಾರೆ.

ನೀರು ಕುಡಿದು ಜನರು ಅಸ್ವಸ್ಥರಾಗುತ್ತಿದ್ದಾರೆ, ಮೂವರು ಮೃತಪಟ್ಟಿದ್ದಾರೆ, ಈ ಬಗ್ಗೆ ತನಿಖೆಯಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!