ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜಕಲ್ ಹಾಗೂ ಬಸರಿಹಾಳ ಗ್ರಾ.ಪಂ. ಪಿಡಿಒ ಅಧಿಕಾರಿಗಳನ್ನ ಅಮಾನತು ಮಾಡಿ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಲೋಪ ಎಸಗಿರು ಹಿನ್ನೆಲೆಯಲ್ಲಿ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾ.ಪಂ. ಪಿಡಿಒ ರವೀಂದ್ರ ಕುಲಕರ್ಣಿ ಹಾಗೂ ಬಿಜಕಲ್ ಗ್ರಾ.ಪಂ. ಪಿಡಿಒ ನಾಗೇಶ್ ಅಮಾನತು ಮಾಡಿ ಪಂಚಾಯತ್ರಾಜ್ ಇಲಾಖೆ ಆಯುಕ್ತೆ ಪ್ರಿಯಾಂಕಾ ಮೇರಿ ಆದೇಶ ನೀಡಿದ್ದಾರೆ.