Tuesday, October 21, 2025

Vijay Rally Stampede: ಕಾಲ್ತುಳಿತದಲ್ಲಿ ಕಣ್ಮುಚ್ಚಿದ ಮೂವರು ಕಂದಮ್ಮಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ದೊಡ್ಡ ಅಪಘಾತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಮೂವರು ಮಕ್ಕಳು ಸೇರಿದಂತೆ ಸುಮಾರು 31ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ಇನ್ನು ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರೂ ಸಂಖ್ಯೆಯಲ್ಲಿ ಜನ ನುಗ್ಗಲು ಪ್ರಾರಂಭಿಸಿದರು. ಈ ವೇಳೆ ಜನಸಂದಣಿ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ.

ಈ ಕಾಲ್ತುಳಿತದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಈವರೆಗೂ ಮೃತರ ಮಾಹಿತಿ ದೊರೆತಿಲ್ಲ.

error: Content is protected !!