Friday, August 19, 2022

Latest Posts

ವಿಷಪೂರಿತ ಆಹಾರ ಸೇವನೆ| ಒಂದೇ ಕುಟುಂಬದ ಮೂವರು ದುರ್ಮರಣ: ಇಬ್ಬರ ಸ್ಥಿತಿ ಗಂಭೀರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವಿಷಪೂರಿತ ಆಹಾರ ಸೇವಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇಬ್ಬರಿ ಸ್ಥಿತಿ ಗಂಭೀರವಾಗಿದೆ. ಈ ದುರ್ಘಟನೆ  ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.

ತಿಪ್ಪಾನಾಯ್ಕ್(46), ಇವರ ಪತ್ನಿ ಸುಧಾಬಾಯಿ(43), ವೃದ್ಧೆ ಗುಂಡಿಬಾಯಿ(75) ಮೃತ ದುರ್ದೈವಿಗಳು.

ರಾಹುಲ್ (18) ಮತ್ತು ರಮ್ಯ(16) ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ರಾತ್ರಿ  ರಾಗಿ ಮುದ್ದೆ, ಸಾರು ಸೇವಿಸಿದ ಬಳಿಕ 5 ಜನರು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮೂವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಕ್ಕಳಿಬ್ಬರನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!