Wednesday, August 10, 2022

Latest Posts

ಪಾಕಿಸ್ತಾನದಲ್ಲಿ ಮೂರು ಮನೆಗಳಿಗೆ ಸಿಡಿಲು ಬಡಿತ: 17 ಮಂದಿ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪಾಕಿಸ್ತಾನದ ವಾಯುವ್ಯ ಭಾಗದಲ್ಲಿರುವ ಹಳ್ಳಿಯೊಂದರಲ್ಲಿ ಸಿಡಿಲು ಬಡಿದು 17 ಮಂದಿ ಮೃತಪಟ್ಟಿದ್ದಾರೆ.
ಮನೆಗೆ ಸಿಡಿಲು ಬಡಿದು ಮಹಿಳೆಯರು, ಮಕ್ಕಳು ಸೇರಿ 17 ಮಂದಿ ಮೃತಪಟ್ಟಿದ್ದಾರೆ. ಮನೆಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಶನಿವಾರದಿಂದಲೇ ಪಾಕಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಜೋರು ಮಳೆಯಾಗುತ್ತಿದ್ದು, ಖೈಬರ್ ಪಂಕ್ತುಂಖ್ವಾ ಪ್ರಾಂತ್ಯದ ತೋರ್ಗಡ್ ಹಳ್ಳಿಯಲ್ಲಿ ಮೂರು ಮಣ್ಣಿನ ಮನೆಗಳಿಗೆ ಸಿಡಿಲು ಬಡಿದಿದೆ.
ಮನೆಗಳ ಅವಶೇಷಗಳಡಿ ಮೃತದೇಹಗಳು ಸಿಲುಕಿದ್ದಿ, ರಕ್ಷಣಾ ತಂಡಗಳ ಜೊತೆ ಸ್ಥಳೀಯರು ಸೇರಿ ಸಹಾಯ ಮಾಡುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss