ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೇತುವೆಯಿಂದ ಕಾರು ಉರುಳಿ ಬಿದ್ದು ಮೂವರು ಸಾನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಗೂಗಲ್ ಮ್ಯಾಪ್ಸ್ ತನಿಖೆ ಎದುರಿಸುತ್ತಿದೆ.
ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ನಿರ್ಮಾಣ ಹಂತದ ಸೇತುವೆಯಿಂದ ಕಾರು ಕೆಳಗೆ ಬಿದ್ದು, ಮೂವರು ಯುವಕರು ಸಾವನ್ನಪ್ಪಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತನಿಖೆಗೆ ಸಹಕಾರಿಸುವುದಾಗಿ ಗೂಗಲ್ ಮ್ಯಾಪ್ ಹೇಳಿಕೊಂಡಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಗೂಗಲ್ ವಕ್ತಾರರು, ಮೃತರ ಕುಟುಂಬಕ್ಕೆ ನಾನು ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇವೆ. ನಾವು ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಸಮಸ್ಯೆಯನ್ನು ತನಿಖೆ ಮಾಡಲು ನಾವು ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಎಂಜಿನಿಯರ್‌ಗಳು ಮತ್ತು ಗೂಗಲ್ ಮ್ಯಾಪ್ಸ್ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಬ್ಬರು ಸಹಾಯಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆಯ ಇಬ್ಬರು ಎಂಜಿನಿಯರ್ ಮತ್ತು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬುದೌನ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತನಿಖೆಯ ಬೆನ್ನಲ್ಲೇ ಗೂಗಲ್ ಮ್ಯಾಪ್ ಈ ಸೇತುವೆಯನ್ನು ತೋರಿಸುವ ಜಾಗದ ರಸ್ತೆ ಮಾರ್ಗವನ್ನು ತನ್ನ ನಕ್ಷೆಯಿಂದ ತೆಗೆದು ಹಾಕಿದೆ.