ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ನೈರುತ್ಯ ಮುಂಗಾರು ರೌದ್ರರೂಪ ತಾಳಿದೆ. ಇಲ್ಲಿನ ಛತ್ರಪತಿ ಸಂಭಾಜಿ ನಗರದಲ್ಲಿ ಭಾರೀ ಮಳೆ ಮತ್ತು ಗಾಳಿಯಿಂದಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂಭಾಜಿನಗರದಲ್ಲಿರುವ ಸಿದ್ಧಾರ್ಥ್ ಗಾರ್ಡನ್ ಬಳಿಯ ಪ್ರವೇಶ ದ್ವಾರ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಬಲಿಪಶುಗಳು ಗೇಟ್ ಬಳಿ ನಿಂತಿದ್ದಾಗ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಕೆಳಗೆ ಸಿಲುಕಿಕೊಂಡಿದ್ದರಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಇನ್ನೂ ಗಾಯಗೊಂಡ ಇಬ್ಬರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರ ಕುಟುಂಬಕ್ಕೆ ಪುರಸಭೆಯು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.