Tuesday, September 16, 2025

ಹಿಮಾಚಲ ಪ್ರದೇಶದಲ್ಲಿ ಭೂಕುಸಿತಕ್ಕೆ ಮೂವರ ಸಾವು, ಬಸ್ ನಿಲ್ದಾಣ ಮುಳುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿಮಾಚಲ ಪ್ರದೇಶದಲ್ಲಿ ರಾತ್ರಿ ಇಡೀ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮಂದಿ ಸಾವಿಗೀಡಾಗಿ, ಮಂಡಿಯಲ್ಲಿ ಬಸ್ ನಿಲ್ದಾಣವೊಂದು ಮುಳುಗಡೆಗೊಂಡಿದೆ.

ಮಂಡಿ ಜಿಲ್ಲೆಯ ಸುಂದರ್‌ನಗರ ಉಪವಿಭಾಗದ ನೆಹ್ರಿ ಪ್ರದೇಶದ ಬೊಯ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮನೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ಅವಶೇಷಗಳಡಿಯಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಮಂಡಿ ಜಿಲ್ಲಾಧಿಕಾರಿ ಅಪೂರ್ವ್ ದೇವಗನ್ ಹೇಳಿದ್ದಾರೆ.

ನಿರಂತರ ಮಳೆಯಿಂದಾಗಿ ಮಂಡಿಯ ಸೋನ್ ಹಾಗೂ ಭದ್ರಾ ಕಾಲುವೆಯಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಬಸ್ಸು ನಿಲ್ದಾಣಕ್ಕೆ ನೀರು ನುಗ್ಗಿ, ಕಾರ್ಯಾಗಾರ, ಪಂಪ್ ಹೌಸ್, ಅಂಗಡಿಗಳಿಗೆ ಹಾಗೂ 20ಕ್ಕೂ ಅಧಿಕ ಬಸ್‌ಗಳಿಗೆ ಹಾನಿಯುಂಟಾಗಿದೆ.

‘ಧರ್ಮಪುರಿ ಬಸ್‌ ನಿಲ್ದಾಣದಲ್ಲಿ ಎರಡು ಡಜನ್‌ಗೂ ಅಧಿಕ ಎಚ್‌ಆರ್‌ಟಿಸಿ ಬಸ್, ಅಂಗಡಿಗಳು, ಪಂಪ್ ಹೌಸ್ ಹಾಗೂ ಕಾರ್ಯಾಗಾರಕ್ಕೆ ಹಾನಿ ಉಂಟಾಗಿದೆ’ ಎಂದು ಉಪ ಮುಖ್ಯಮಂತ್ರೊ ಮುಕೇಶ್ ಅಗ್ನಿಹೋತ್ರಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ