ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸಂಭವಿಸಿದ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಚಂದ್ರಶೇಖರ (57) ಶಿಶಿಲ, ಜನಾರ್ದನ ಗೌಡ (58) ಉಜಿರೆ, ಶ್ರೀಧರ ಗೌಡ (61) ಮರಕಡ ಎಂದು ಗುರುತಿಸಲಾಗಿದ್ದು, ಕಾರಿನಲ್ಲಿದ್ದ ಇನ್ನೊರ್ವ ಸುರೇಶ (58) ಉಜಿರೆ ಎಂಬರವರಿಗೆ ಗಂಭೀರ ಗಾಯವಾಗಿದೆ.
ಗಾಯಾಳನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದು ಕಾರು ( ಕೆ.ಎ 21 ಎನ್ 5873) ಹಾಗೂ ಧರ್ಮಸ್ಥಳದಿಂದ ತಿರುಪತಿಗೆ ಹೋಗುತ್ತಿದ್ದ ರಾಜಹಂಸ ಕೆಎಸ್‌ಆರ್‌ಟಿಸಿ ಬಸ್ (ಕೆ.ಎ 21 ಎಫ್ 0239) ನಡುವೆ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ ಮುಂಭಾಗಕ್ಕೂ ಒಂದಿಷ್ಟು ಹಾನಿಯಾಗಿದೆ. ಬಸ್ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಉಪ್ಪಿನಂಗಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



