ದಿಗಂತ ವರದಿ ಹಾವೇರಿ:
ಸವಣೂರು ತಾಲೂಕು ಮಾದಾಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಇಬ್ಬರು ಪುಟ್ಟ ಮಕ್ಕಳು ಸೇರಿ ಮೂವರು ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ತಿಳಿಸಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ.
ಘಟನೆ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮೂವರು ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದ್ದು, ಅಗತ್ಯವೆನಿಸಿದರೆ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್‍ಗೆ ದಾಖಲು ಮಾಡಲು ಸೂಚಿಸಿದ್ದಾರೆ.
ಎನ್ ಡಿ ಆರ್ ಎಫ್ ಮಾರ್ಗಸೂಚಿ ಅನ್ವಯ ಮೃತರ ಕುಟುಂಬದವರಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.