ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ನ (Jharkhand) ಧನ್ಬಾದ್ (Dhanbad) ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.
ಧನ್ಬಾದ್ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ನ (BCCL) ಭೌರಾ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ.
ಸಾವಿಗೀಡಾದವರ ಸಂಖ್ಯೆ ಮತ್ತು ಗಾಯಗೊಂಡವರ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಸಿಂದ್ರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ), ಅಭಿಷೇಕ್ ಕುಮಾರ್ ಹೇಳಿದ್ದಾರೆ.
ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಿಸಿಸಿಎಲ್ (ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್) ತೆರೆದ ಗಣಿ ಭಾಗ ಕುಸಿದಿದೆ. ಒಂದು ಮೃತದೇಹ ಪತ್ತೆಯಾಗಿದೆ. ಎಷ್ಟು ಜನ ಸತ್ತಿದ್ದಾರೆ ಎಂಬುದು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಬಿಸಿಸಿಎಲ್ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಧನಬಾದ್ ಎಸ್ಎಸ್ಪಿ ಸಂಜೀವ್ ಕುಮಾರ್ ಹೇಳಿದ್ದಾರೆ.