ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ದೆಹಲಿಯ ನರೈನಾ ಕೈಗಾರಿಕ ಪ್ರದೇಶದ ಕಾರ್ಖಾನೆಯೊಂದರ ಲಿಫ್ಟ್ ಕುಸಿದು ಬಿದ್ದಿದ್ದು, ಮೂವರು ಮೃತಪಟ್ಟಿದ್ದಾರೆ.
ಲಿಫ್ಟ್ನಲ್ಲಿದ್ದ ಕಾರ್ಮಿಕರಾದ ಕುವಲಂತ್ ಸಿಂಗ್, ದೀಪಕ್ ಕುಮಾರ್ ಹಾಗೂ ಸನ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಟ್ಕಾ ಕಾರ್ಖಾನೆಯ ಲಿಫ್ಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿದ್ದು, ಮೂವರು ಕೆಳಗೆ ಬಿದ್ದಿದ್ದಾರೆ. ಒಂದೂವರೆ ಗಂಟೆ ಅವರು ಕೆಳಗೆ ಸಿಕ್ಕಿಹಾಕಿಕೊಂಡಿದ್ದರು ಎನ್ನಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬರುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಬಗ್ಗೆ ತನಿಖೆ ಆರಂಭವಾಗಿದೆ.