ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದಿದ್ದು,ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ಅವಘಡ ಸಂಭವಿಸಿದ್ದು, ಬೆಳಗಾವಿಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತಪಟ್ಟಿದ್ದಾರೆ.
ಈ ಅವಘಡದಲ್ಲಿ ನಾಲ್ವರು ಮಣ್ಣಿನಡಿ ಸಿಲುಕಿದ್ದು, ರಾಜು ಎಂಬ ಕಾರ್ಮಿಕ ಇತರರ ಸಹಾಯದಿಂದ ಮೇಲೆ ಬಂದಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ, ಮಣ್ಣಿನಡಿ ಒಂದು ಗಂಟೆ ಸಿಲುಕಿದ ಕಾರಣ ಮೂವರು ಮೃತಪಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.