ಹೊಸದಿಗಂತ ಡಿಜಿಟಲ್ ಡೆಸ್ಕ್:
ನವರಾತ್ರಿಯ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನೂಕುನುಗ್ಗಲಿನಿಂದಾಗಿ ಐದು ವರ್ಷದ ಬಾಲಕ ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಗೋಪಾಲಗಂಜ್ ಜಿಲ್ಲೆಯ ರಾಜದಳ ಪ್ರದೇಶದಲ್ಲಿ ದುರ್ಗಾ ಪೂಜಾ ವೇಳೆ ಪ್ರಸಾದ ಸ್ವೀಕರಿಸುವ ಸಂದರ್ಭದಲ್ಲಿ ಕಾಲ್ತುಳಿತದಿಂದಾಗಿ ಹಲವರು ಗಾಯಗೊಂಡಿದ್ದಾರೆ.
ಪ್ರಸಾದ ಸ್ವೀಕರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಇದನ್ನು ಕಂಡ ಮಹಿಳೆಯರು ಬಾಲಕನನ್ನು ರಕ್ಷಿಸಲು ಮುಂದಾದಾಗ ತಾವೂ ಕೆಳಗೆ ಬಿದ್ದು ಜನರ ಕಾಲ್ತುಳಿತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸ್ವರ್ಣ ಪ್ರಭಾತ್ ತಿಳಿಸಿದ್ದಾರೆ.
ನಂತರ ನಡೆದ ಗಲಾಟೆಯಲ್ಲಿ 13 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ಸದರ್ ಆಸ್ಪತ್ರೆಗೆ ಕರೆದೊಯ್ಯಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದಂತೆ ಇನ್ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ.