ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರಿ ಹಾಗೂ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಇಂದು ಬೆಳಗ್ಗೆ ಈ ದುರಂತ ಸಂಭವಿಸಿದೆ. ಮೃತರನ್ನು ಆಕಾಶ್(20), ಹೇಮಂತ್(28) ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಪಾವಗಡ ಕಡೆಗೆ ತೆರಳುತ್ತಿದ್ದ ಕಾರು, ಪಾವಗಡದಿಂದ ತುಮಕೂರಿನ ಕಡೆಗೆ ಚಲುಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಪಾವಗಡ ಮೂಲದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಜ್ವಲ್ ಕೃಷ್ಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.