September 28, 2026
Monday, September 28, 2026
spot_img

ಸಿಬಿಎಸ್​ಇ ವಿದ್ಯಾರ್ಥಿಗಳಿಗೆ ತ್ರಿಭಾಷಾ ಸೂತ್ರ: ಹಿಂದಿಯೇತರ ರಾಜ್ಯಗಳ ಮೇಲೆ ಮಾಡುವ ದಬ್ಬಾಳಿಕೆ ಎಂದ ಎಂ.ಕೆ.ಸ್ಟಾಲಿನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಶೈಕ್ಷಣಿಕ ವರ್ಷದಿಂದ ಸಿಬಿಎಸ್​ಇ 6ನೇ ತರಗತಿಯ ವಿದ್ಯಾರ್ಥಿಗಳಿಗೆ ತ್ರಿಭಾಷಾ ಸೂತ್ರ ಜಾರಿಗೆ ತರುವ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಕಿಡಿಕಾರಿದ್ದು, ಇದು ಹಿಂದಿಯೇತರ ರಾಜ್ಯಗಳ ಮೇಲೆ ಭಾಷೆ ಹೇರಿಕೆ ಮಾಡುವ ಮೂಲಕ ದಬ್ಬಾಳಿಕೆ ಮಾಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಹಾಕಿರುವ ಅವರು, ಕೇಂದ್ರ ಸರಕಾರ ಭಾಷಾ ನೀತಿಯ ಹೆಸರಿನಲ್ಲಿ ಎಲ್ಲೆಡೆ ಹಿಂದಿಯನ್ನು ಹರಡಲು ಯತ್ನಿಸುತ್ತಿದ್ದಿದ್ದು, ಈ ಮೂಲಕ ದಕ್ಷಿಣ ರಾಜ್ಯಗಳ ವಿದ್ಯಾರ್ಥಿಗಳಿಗೆ ಹಿಂದಿ ಕಲಿಕೆಯನ್ನು ಬಲವಂತಗೊಳಿಸಲಾಗುತ್ತಿದೆ. ಇದರಿಂದ ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯೋಜನ ಸಿಗಲಿದ್ದು, ಉಳಿದ ರಾಜ್ಯಗಳ ನಡುವೆ ಅಸಮಾನತೆಯನ್ನು ಹೆಚ್ಚಿಸುತ್ತದೆ ಎಂದು ಟೀಕಿಸಿದರು.

ಈಗಾಗಲೇ ಹೊಸ ಪಠ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ, ಅನಿಮೇಷನ್ ಹಾಗೂ ಗೇಮಿಂಗ್‌ನಂತಹ ಕೌಶಲ್ಯಗಳನ್ನು ಒದಗಿಸಲು ಹೊರಟಿದ್ದು, ಇದರ ಜೊತೆಗೆ ಹೆಚ್ಚುವರಿ ಭಾಷಾ ಹೊರೆ ಹೇರುವುದು ಸರಿಯಲ್ಲ.ಕೋಟ್ಯಂತರ ಜನರ ಭಾಷಾ ಗುರುತಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

Must Read