Wednesday, September 3, 2025

ನೇಪಾಳ ಗಡಿ ಮೂಲಕ ಭಾರತ ಪ್ರವೇಶಿಸಿದ ಮೂವರು LET ಉಗ್ರರು : ಬಿಹಾರದಲ್ಲಿ ಹೈ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿಷೇಧಿತ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಮೂವರು ಉಗ್ರರು ನೇಪಾಳ ಗಡಿಯ ಮೂಲಕ ಭಾರತ ಪ್ರವೇಶಿಸಿದ್ದು, ಮುಂಬರೂವ ಬಿಹಾರ ವಿಧಾನಸಭೆ ಚುನಾವಣೆ ವೇಳೆ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದಾರಂದು ತಿಳಿದುಬಂದಿದೆ.

ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಬಿಹಾರ ಪೊಲೀಸ್ ಪ್ರಧಾನ ಕಚೇರಿಯು ಗುರುವಾರ ಬಿಹಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ.

ಉಗ್ರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರನ್ನು ರಾವಲ್ಪಿಂಡಿ ನಿವಾಸಿ ಹಸ್ನಾನಿನ್ ಅಲಿ, ಉಮರ್ಕೋಟ್‌ನ ಆದಿಲ್ ಹುಸೇನ್ ಮತ್ತು ಭವಾಲ್ಪುರದ ಮೊಹಮ್ಮದ್ ಉಸ್ಮಾನ್ ಎಂದು ಗುರುತಿಸಲಾಗಿದೆ. ಈ ಮೂವರು ಆಗಸ್ಟ್ ಎರಡನೇ ವಾರದಲ್ಲಿ ನೇಪಾಳದ ಕಠ್ಮಂಡುವಿಗೆ ಆಗಮಿಸಿ, ಗಡಿ ಮೂಲಕ ಕಳೆದ ವಾರ ಬಿಹಾರ ತಲುಪಿದ್ದಾರೆ. ಇವರಿಗೆ ಸ್ಥಳೀಯ ನೇಪಾಳಿ ನಿವಾಸಿಯೊಬ್ಬರು ನೆರವು ನೀಡಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.

ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಜಾಗರೂಕರಾಗಿರಿ ಮತ್ತು ತಕ್ಷಣ ಪೊಲೀಸರಿಗೆ ತಿಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ