ಹೊಸ ದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದಿನದಿಂದ ದಿನಕ್ಕೆ ಅಸಮಾಧಾನಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರದ ವಿರುದ್ದ ಸ್ವಪಕ್ಷದ ನಾಯಕರ ಹೇಳಿಕೆಯೇ ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದು, ಎಲ್ಲಾ ಅಸಮಾಧಾನಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಪಕ್ಷದ ಸಂಘಟನೆ ಹಾಗೂ ಇನ್ನಿತರ ವಿಚಾರವಾಗಿ ದೆಹಲಿಯಲ್ಲಿ ನಮ್ಮ ಹೈಕಮಾಂಡ್ ನಾಯಕರ ಜೊತೆಗೆ ಮೂರು ಹಂತದ ಸಭೆ ನಡೆಯಲಿದೆ ಎಂದು ಹೇಳಿದರು.
ಅ.2ರಂದು ದೆಹಲಿಯಲ್ಲಿ ನಮ್ಮ ವರಿಷ್ಠರು ಸಭೆ ನಡೆಸಲಿದ್ದಾರೆ ಎಂದರು.
ದೆಹಲಿಯಲ್ಲಿ ಲೋಕಸಭಾ ಚುನಾವಣೆಯ ದೃಷ್ಟಿಯಿಂದಲೇ ಸಭೆ ನಡೆಯುತ್ತಿದೆ. ನಮ್ಮ ಗ್ಯಾರಂಟಿ ಜನರಿಗೆ ತಲುಪುತ್ತಿದೆಯಾ? ಎಂಬ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆಯೂ ದೆಹಲಿಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.