ಎನ್‌ಕೌಂಟರ್‌ ನಡೆಸಿ ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಮಾವೋವಾದಿ ನಕ್ಸಲರು ಹತ್ಯೆಯಾಗಿದ್ದಾರೆ.
ಮಿರ್ತೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಪೊಮ್ರಾ ಅರಣ್ಯದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಭದ್ರತಾ ಪಡೆಗಳ ಜಂಟಿ ತಂಡಗಳು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ತಿಳಿಸಿದ್ದಾರೆ.
ಡಿಆರ್‌ಜಿಯ ಗಸ್ತು ತಂಡವು ಪೊಮ್ರಾ ಅರಣ್ಯದಲ್ಲಿದ್ದಾಗ, ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ. ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಲಾಗಿದೆ. ಮಾವೋವಾದಿಗಳ ವಿಭಾಗೀಯ ಸಮಿತಿಯ ಸದಸ್ಯರಾದ ಮೋಹನ್ ಕಡ್ತಿ ಮತ್ತು ಸುಮಿತ್ರಾ ಅವರ ಉಪಸ್ಥಿತಿಯನ್ನು ಕಂಡುಕೊಂಡ ಬಳಿಕ ದಾಳಿ ತೀವ್ರಗೊಳಿಸಲಾಗಿದೆ.
ಗುಂಡಿನ ಚಕಮಕಿಯನ್ನು ನಿಲ್ಲಿಸಿದ ನಂತರ, ಮಹಿಳೆ ಸೇರಿದಂತೆ ಮೂವರು ಮಾವೋವಾದಿಗಳ ಶವಗಳನ್ನು ಸ್ಥಳದಲ್ಲಿ ಪಡೆಯಲಾಗಿದೆ ಎಂದು ಐಜಿ ಹೇಳಿದರು. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!