ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ.
ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಸಾಲಬಾಧೆಯಿಂದ ಬೇಸತ್ತಿದ್ದ ದಂಪತಿ, ಮಗಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು. ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು.
ಆದರೆ ಸಾಲಗಾರರ ಕಾಟ ತಾಳಲಾರದೆ ಇಂದು ಬೆಳಗ್ಗೆ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರೈಲು ಹರಿದ ಪರಿಣಾಮ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.