ಊಟ ಮಾಡಿದ ನಂತರ ಇದ್ದಕ್ಕಿದ್ದಂತೆಯೇ ಹೊಟ್ಟೆನೋವು, ಒಂದೇ ಕುಟುಂಬದ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಸಂಭವಿಸಿದೆ.

ಸ್ಥಳೀಯ ಆಸ್ಪತ್ರೆಯಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) ಮೃತಪಟ್ಟರೆ, ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ದೀಪಾ(6) ಸಾವಿಗೀಡಾಗಿದ್ದಾಳೆ. ಸದ್ಯ ರಮೇಶ್ ಅವರ​ ಪತ್ನಿ ಪದ್ಮಾರನ್ನು ರಿಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

ಮತ್ತಿಬ್ಬರು ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕುಟುಂಬದವರೆಲ್ಲ ಸೋಮವಾರ ರಾತ್ರಿ ಚವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಸೇವನೆ ಮಾಡಿದ್ದರು. ಊಟ ಮಾಡಿ ಮಲಗಿದ್ದ 6 ಜನರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು.

ಹೊಟ್ಟೆ ನೋವಿನಿಂದ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾನೆ 4 ಗಂಟೆ ಸುಮಾರಿಗೆ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ತಂದೆ ರಮೇಶ್, ಪುತ್ರಿ ನಾಗಮ್ಮ ಸಾವಿಗೀಡಾಗಿದ್ದಾರೆ. ಮತ್ತೋರ್ವ ಪುತ್ರಿ ದೀಪಾ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾಳೆ.

ಸದ್ಯ ಈ ಘಟನೆ ಕೆ.ತಿಮ್ಮಾಪುರ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕವಿತಾಳ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!