ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಟ್ಟೆ ಒಗೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿರುವ ಘಟನೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ಮೀನಾ (33), ಪವಿತ್ರ (13) ಮತ್ತು ಕೀರ್ತಿ (12) ಮೃತ ದುರ್ದೈವಿಗಳು.
ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋದಾಗ ಈ ಘಟನೆ ನಡೆದಿದೆ. ಮೀನಾ ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಜಾರಿ ಬಿದಿದ್ದಾರೆ. ತಾಯಿ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಮಕ್ಕಳು ಆಕೆಯ ನೆರವಿಗೆ ಧಾವಿಸಿದ್ದಾರೆ.
ಪವಿತ್ರ ಮತ್ತು ಕೀರ್ತಿ ತಮ್ಮ ತಾಯಿಯನ್ನು ಉಳಿಸಲು ನೀರಿಗೆ ಜಿಗಿದಿದ್ದಾರೆ. ಆದರೆ ನೀರಿಂದ ಹೊರ ಬರಲಾಗದೆ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಲೂಕಿನ ಹನೋವರ್ನ ಗೋಪಿನಾಥಂನಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.