ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಮೂರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಇಲ್ಲಿ ಈವರೆಗೆ 12 ಮಂಗಿಪಾಕ್ಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಐದು ರೋಗಿಗಳನ್ನು ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯಕ್ಕೆ ಯಾವುದೇ ಶಂಕಿತ ರೋಗಿಯನ್ನು ಅಲ್ಲಿ ದಾಖಲಿಸಲಾಗಿಲ್ಲ’ ಎಂದು ಮೂಲಗಳು ತಿಳಿಸಿವೆ.