ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ, ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ನ್ಯಾಯಲಯದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡಲು ಹೆಸರುಗಳನ್ನು ಚರ್ಚಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಐವರು ಸದಸ್ಯರ ಕೊಲಿಜಿಯಂ ಸಭೆ ಸೇರಿ ಈ ಮೂರು ಹೆಸರುಗಳನ್ನು ಅಂತಿಮಗೊಳಿಸಿದೆ.
34 ನ್ಯಾಯಧೀಶರ ಬಲ ಹೊಂದಿರುವ ಸುಪ್ರೀಂ ಕೋರ್ಟ್ ನಲ್ಲಿ ಸದ್ಯ 31 ನ್ಯಾಯಧೀಶರು ಕಾರ್ಯನಿರ್ವಹಿಸುತ್ತಿದ್ದಾರೆ.