Wednesday, August 10, 2022

Latest Posts

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹೊಸ ದಿಗಂತ ವರದಿ,ದಾವಣಗೆರೆ:

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಇಲ್ಲಿನ ಶೇಖರಪ್ಪ ನಗರದಲ್ಲಿ ನಡೆದಿದೆ. ಕೃಷ್ಣನಾಯ್ಕ(43), ಪತ್ನಿ ಸರಸ್ವತಿಬಾಯಿ(35) ಹಾಗೂ ಮಗ ಧೃವ(8) ಮೃತ ದುರ್ದೈವಿಗಳು.
ಕೃಷ್ಣನಾಯ್ಕ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಮಗು ಮತ್ತು ತಾಯಿ ಮಲಗಿರುವ ಸ್ಥಿತಿಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಆಹಾರದಲ್ಲಿ ತಾಯಿ, ಮಗನಿಗೆ ವಿಷ ಕೊಟ್ಟು, ನಂತರ ಕೃಷ್ಣನಾಯ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಲಾರಿ ಚಾಲಕನಾಗಿದ್ದ ಕೃಷ್ಣನಾಯ್ಕ ಕೆಲ ದಿನಗಳ ಹಿಂದೆ ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಈ ಮಧ್ಯೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರಸ್ವತಿಬಾಯಿ ಚಿಕಿತ್ಸೆಗೆ ಹಣ ಇಲ್ಲದ ಕಾರಣ ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ
ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಎಸ್ಪಿ ಸಿ.ಬಿ.ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆರ್‌ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss