ವಿಜಯಪುರದಲ್ಲಿ ಡಿಡಿಪಿಐ ಸಹಿತ ಮೂವರು ಅಧಿಕಾರಿಗಳು ಅಮಾನತು

ಹೊಸದಿಗಂತ ವರದಿ, ವಿಜಯಪುರ:

ಜಿಲ್ಲೆಯಲ್ಲಿ ಐಇಡಿಎಸ್‌ಎಸ್ ಯೋಜನೆ ಅನುಷ್ಠಾನಗೊಳಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆ ಡಿಡಿಪಿಐ ಸೇರಿ ಮೂವರು ಅಧಿಕಾರಿಗಳು ಅಮಾನತುಗೊಂಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ ಸೇರಿದಂತೆ ಡಯಟ್ ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ, ಎ.ಎಸ್. ಹತ್ತಳ್ಳಿ ಅವರು ಸೇವೆಯಿಂದ ಅಮಾನತುಗೊಂಡಿದ್ದಾರೆ.

2009 ಮತ್ತು 2011-12ನೇ ಸಾಲಿನಲ್ಲಿ ಐಇಡಿಎಸ್‌ಸ್ ಯೋಜನೆಯಡಿ ಅನುದಾನ ದುರುಪಯೋಗವಾಗಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಶಿಫಾರಸು ಮಾಡಿರುವ ಆರೋಪದ ಹಿನ್ನೆಲೆ ಮೂವರನ್ನು ಅಮಾನತುಗೊಳಿಸಿ, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!